ಕಾಂಗ್ರೆಸ್ ನವರು ಏನೂ ಮಾಡಿಯೇ ಇಲ್ವೇ ? ಯಾರು ಸಾಚ ಇದ್ದಾರೆ ಹೇಳಿ: ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

ಹೊಸ ದಿಗಂತ ವರದಿ, ಮೈಸೂರು:

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮೀಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್‌ನವರು ಏನೂ ಮಾಡಿಯೇ ಇಲ್ವೇ ? ಯಾರು ಸಾಚ ಇದ್ದಾರೆ ಹೇಳಿ? ಎಂದು ಜೆಡಿಎಸ್‌ನ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನಿಸಿದರು.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ಜೆಡಿಎಸ್‌ವತಿಯಿಂದ ಆಯೋಜಿಸಲಾಗಿದ್ದ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜಕಾರಣದಲ್ಲಿ ಯಾರೂ ಸತ್ಯವಂತರು? ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ.
ª ಕಾಂಗ್ರೆಸ್ ಸರ್ಕಾರ ಇದ್ದಾಗ 10 % ಸರ್ಕಾರ ಅಂತ ಪ್ರಧಾನಿಯೇ ಆರೋಪ ಮಾಡಿದ್ದರು. ಆಗಲೂ ನಾನು ಆರೋಪ ಮಾಡಲಿಲ್ಲ. ಈಗಲೂ ಅಷ್ಟೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡಲ್ಲ. ಭ್ರಷ್ಟಾಚಾರ ಎಲ್ಲ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗುತ್ತಿಗೆದಾರರ ಸಂಘದವರು ಮಾಡಿರುವ ಶೇ 40 ಪರ್ಸೆಂಟ್ ಕಮಿಷನ್ ಆರೋಪಕ್ಕೂ ನನಗೂ ಯಾವುದೇ ಸಂಬoಧವಿಲ್ಲ. ನನ್ನ ಮಗ ನೀರಾವರಿ ಸಚಿವ ಅಥವಾ ಪಿಡಬ್ಲೂಡಿ ಸಚಿವ ಆಗಿದ್ದರೇ ನಾನು ಮಾತನಾಡುತ್ತಿದ್ದೆ. ಈಗ ಆರೋಪಕ್ಕೂ ನನಗೂ ಸಂಬoಧವಿಲ್ಲ. ಆರೋಪ ಮಾಡಿಕೊಳ್ಳಲಿ ಬಿಡಿ ನಮಗೇನು ಎಂದರು.
ರಾಜ್ಯದಲ್ಲಿ ಜಲ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಿಜೆಪಿ- ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಾವೇರಿ, ಕಬಿನಿ, ಕೃಷ್ಣ ಸೇರಿದಂತೆ ಬಹುತೇಕ ಅಂತಾರಾಜ್ಯ ನದಿಗಳು. ಈ ನದಿಗಳ ನೀರು ಹಂಚಿಕೆಯ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ ಅಂತ ನಾನು ರಾಜ್ಯಸಭೆಯಲ್ಲಿ ಕೈಮುಗಿದು ಮನವಿ ಮಾಡಿದೆ. ಆದರೆ ಯಾವ ಪಕ್ಷದವರೂ ನನಗೆ ಸಹಕಾರ ಕೊಡಲಿಲ್ಲ.
ನೀರಿನ ವಿಚಾದಲ್ಲಿ ತಮಿಳುನಾಡಿನ ಪಕ್ಷಗಳು ಒಂದಾಗುತ್ತವೆ. ಆದರೆ ಕರ್ನಾಟಕದ ಪಕ್ಗಗಳು ಒಂದಾಗಲ್ಲ. ಮಹದಾಯಿ ಯೋಜನೆ ವಿಚಾರದಲ್ಲಿ ಸಾಕಷ್ಟು ನೋವಿದೆ ಜಲಸಂಪನ್ಮೂಲ ಸಚಿವರು 3 ಬಾರಿ ಸಮಯ ಕೊಟ್ಟಿದ್ದರು ಮನೆಗೆ ಭೇಟಿಗೆ ಹೋದರೆ ಸಿಗಲಿಲ್ಲ ಎಂದು ಕಿಡಿಕಾರಿದರು.
ನಮ್ಮದು ಪ್ರಾದೇಶಿಕ ಪಕ್ಷ. ಜನರಿಗೆ ಜಾಗೃತಿ ಬಂದರೆ ಸಹಜವಾಗಿ ಒಳ್ಳೆಯ ಆಯ್ಕೆ ಮಾಡುತ್ತಾರೆ. ಆದ್ದರಿಂದ ಜಲಧಾರೆ ಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!