spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಾಯಕರಿಗೆ ಅದ್ಧೂರಿ ಸ್ವಾಗತದ ವೇಳೆ ಕೊರೋನಾ ನಿಯಮ ಮರೆತ ಕಾಂಗ್ರೆಸಿಗರು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ಕೋವಿಡ್ ನಿಯಮವನ್ನು ಕಾಂಗ್ರೆಸ್ ನಾಯಕರು ಮತ್ತು ಮುಖಂಡರು ಪಾಲನೆ ಮಾಡುವ ಗೋಜಿಗೆ ಹೋಗಲಿಲ್ಲ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ ಸುರ್ಜೇವಾಲ ಅವರು ಶನಿವಾರ ಮೈಸೂರು ವಿಭಾಗೀಯ ಮುಖಂಡರ ಸಭೆ ನಡೆಸಲು ಮೈಸೂರಿಗೆ ಆಗಮಿಸಿದರು. ಈ ವೇಳೆ ಅವರನ್ನು ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಆದರೆ, ಮೆರವಣಿಗೆ ವೇಳೆ ಕೋವಿಡ್ ನಿಯಮ ಪಾಲನೆಯಾಗಲಿಲ್ಲ.
ರಾಜ್ಯ ಉಸ್ತುವಾರಿ ಸುಜ್ರೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೇಬಿನ ಹಾರ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ನಾಯಕರನ್ನು ಸರೋಟದ ಮೇಲೆ ಕೂರಿಸಿ, ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ಮಾಡಲಾಯಿತು ಮೆರವಣಿಗೆ ವೇಳೆ ಒಬ್ಬರ ಮೇಲೊಬ್ಬರು ಮುಗಿಬಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss