ಗ್ಯಾರಂಟಿಗಳ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇವೆಂಬ ಕಾಂಗ್ರೆಸ್ಸಿನ ಕನಸು ನುಚ್ಚುನೂರು: ವಿಜಯೇಂದ್ರ

ಹೊಸದಿಗಂತ ವರದಿ,ರಾಯಚೂರು :

ಕಾಂಗ್ರೆಸ್ಸಿನ ಸರ್ಕಾರದ ಗ್ಯಾರಂಟಿಗಳ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತೇವೆಂಬ ಕನಸು ನುಚ್ಚುನೂರಾಗಿದೆ. ಮೊದಲನೆ ಹಂತದಲ್ಲಿನ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಮಾಹಿತಿಯಿಂದ ಪ್ರಜ್ವಲ್ ರೇವಣ್ಣ ಪ್ರಕರವನ್ನು ಮುಂದಿಟ್ಟುಕೊoಡು ಕಾಂಗ್ರೆಸ್ಸಿಗರು ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹರಿಹಾಯ್ದರು.

ಜಿಲ್ಲೆಯ ಲಿಂಗಸುಗೂರು ಪಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಅವಧಿಯಲ್ಲಿನ ಸಾಧನೆಗಳನ್ನು ಮುಂದಿಟ್ಟುಕೊoಡು ಚುನಾವಣೆಯನ್ನು ಮಾಡದೇ ವಿನಾಕಾರಣ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮುನ್ನೆಲೆಗೆ ತಂದು ಚುನಾವಣೆ ಮಾಡುತ್ತಿದೆ. ಇದು ಕಾಂಗ್ರೆಸ್ಸಿಗರ ಹತಾಶಯವನ್ನು ತೋರಿಸುತ್ತದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ಒಪ್ಪಿಸಿದೆ. ಪ್ರಕರಣದ ತನಿಖೆ ಮಾಡುವುದಕ್ಕೆ ಅವಕಾಶ ಮಾಡಿಕೊಡಿ, ಪ್ರಕರಣದ ತನಿಖೆ ದಾರಿ ತಪ್ಪುವುದಕ್ಕೆ ಎಡೆಮಾಡಿಕೊಡಬೇಡಿ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ಧನರಡ್ಡಿ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!