2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ

ಹೊಸದಿಗಂತ ವರದಿ ಮಡಿಕೇರಿ: ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುವುದೇ ಕಾಂಗ್ರೆಸ್‌ನ ಗುರಿಯಾಗಿದೆ ಎಂದು ಸಚಿವ ಪಿ.ಎಂ.ನರೇಂದ್ರಸ್ವಾಮಿ ಹೇಳಿದ್ದಾರೆ. ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ. ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಂದೇ. ಎಲ್ಲಾ ಸಮಸ್ಯೆಗಳಿಗೂ ಪಕ್ಷದ ನಾಯಕತ್ವವೇ ಸೂಕ್ತ ಪರಿಹಾರ ಕಂಡುಕೊಳ್ಳಲಿದೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು … Continue reading 2029ಕ್ಕೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ಕಾಂಗ್ರೆಸ್ ಗುರಿ: ಸಚಿವ ಪಿ.ಎಂ.ನರೇಂದ್ರಸ್ವಾಮಿ