ಹೊಸದಿಗಂತ ವರದಿ, ಬಳ್ಳಾರಿ:
ಗಣಿನಾಡು ಬಳ್ಳಾರಿ ಜಿಲ್ಲೆ ಹಾಗೂ ವಿಜಯನಗರ ನೂತನ ಜಿಲ್ಲೆಯಲ್ಲಿ ಡಿ.27 ರಂದು ನಡೆದ ಸ್ಥಳೀಯ ಸಂಸ್ಥೆಯ ಚುನಾವಣೆ ಎಣಿಕೆ ಕಾರ್ಯ ಗುರುವಾರ ನಡೆದಿದ್ದು, ಬಹುತೇಕ ಕಡೆ ಕಾಂಗ್ರೆಸ್ ಮೆಲುಗೈ ಸಾಧಿಸಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ, ಹಗರಿಬೊಮ್ಮನಹಳ್ಳಿ ಪುರಸಭೆ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಬಳ್ಳಾರಿ ಜಿಲ್ಲೆಯ ಕುರೇಕೊಪ್ಪ ಪುರಸಭೆ ಹಾಗೂ ಕುರಗೋಡು ಪುರಸಭೆಯ ಮತ ಎಣಿಕೆ ಕಾರ್ಯ ಆಯಾ ಕ್ಷೇತ್ರದಲ್ಲಿ ಗುರುವಾರ ನಡೆದಿದ್ದು, ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಮೊದಲ ಸ್ಥಾನ ಪಡೆದಿದೆ, ಬಹುತೇಕ ಎಲ್ಲ ಕಡೆಗಳಲ್ಲೂ ಬಿಜೆಪಿ ತೀವ್ರ ಪೈಪೋಟಿ ನೀಡಿದೆ.
ಹೊಸಪೇಟೆ ನಗರಸಭೆಯ 35 ವಾರ್ಡ್ ಗಳಲ್ಲಿ ಬಿಜೆಪಿ 10 ಸ್ಥಾನ, ಕಾಂಗ್ರೆಸ್ 12, ಪಕ್ಷೇತರರು 12 ಹಾಗೂ 1 ಸ್ಥಾನ ಆಮ್ ಆದ್ಮಿ ಪಾರ್ಟಿ ಖಾತೆ ತೆರೆದಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ 18ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 13, ಬಿಜೆಪಿ 4 ಹಾಗೂ 1 ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಹಗರಿಬೊಮ್ಮನಹಳ್ಳಿ ಪುರಸಭೆಯ 23 ಸ್ಥಾನಗಳಲ್ಲಿ ಕಾಂಗ್ರೆಸ್ 12, ಬಿಜೆಪಿ 11 ಸ್ಥಾನಗಳನ್ನು ಪಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕೊಪ್ಪ ಪುರಸಭೆಯ 18 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8, ಬಿಜೆಪಿ 7, ಜೆಡಿಎಸ್ 2 ಹಾಗೂ 1 ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಕುರಗೋಡು ಪುರಸಭೆಯ 23 ಸ್ಥಾನಗಳಿಗಳಲ್ಲಿ ಕಾಂಗ್ರೆಸ್ 15, ಬಿಜೆಪಿ 7 ಹಾಗೂ 1 ಪಕ್ಷೇತರ ಗೆಲುವಿನ ನಗೆ ಬೀರಿದ್ದಾರೆ.