Tuesday, March 28, 2023

Latest Posts

ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ನಾಳೆ ಪ್ರಮಾಣವಚನ ಸ್ವೀಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ನ್ಯಾಷನಲ್ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಕಾನ್ರಾಡ್ ಸಂಗ್ಮಾ ಅವರು ಮಂಗಳವಾರ ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈಗಾಗಲೇ ಸಂಗ್ಮಾ ಅವರು ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ತಮಗೆ 45 ಶಾಸಕರ ಬೆಂಬಲವಿದ್ದು, ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಹಕ್ಕು ಮಂಡಿಸಿದ್ದಾರೆ.
ಸಂಗ್ಮಾ ಅವರು ಯುಡಿಪಿ, ಬಿಜೆಪಿ, ಎಚ್‌ಎಸ್‌ಪಿಡಿಪಿ ಮತ್ತು ಇಬ್ಬರು ಪಕ್ಷೇತರ ಶಾಸಕರ ಬೆಂಬಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಮಾರ್ಚ್ 7ರಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಗ್ಮಾ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!