ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಪಾಕಿಸ್ತಾನ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್ ದಾಖಲಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂ.21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ.
ಪಾಕ್ ತಂಡದ ಪ್ರದರ್ಶನದ ಬಗ್ಗೆ ಅರ್ಜಿದಾರರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದರಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.