ಒಂದೇ ಮನೆಯಲ್ಲಿ ವಾಸವಿರುವ ಕಾರಣ ದಂಪತಿ ಸಮ್ಮತಿಯ ವಿಚ್ಚೇದನ ನಿರಾಕರಿಸುವಂತಿಲ್ಲ: ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಂಪತಿಗಳು ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಚೇದನ (Divorce) ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ (Karnataka High Court) ಆದೇಶಿಸಿದೆ.

ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ದಂಪತಿ , ಪರಸ್ಪರ ಒಪ್ಪಿಗೆಯ ವಿಚ್ಛೇದನ ನೀಡುವಂತೆ ಮನವಿ ಮಾಡಿದ್ದರು.
ಈ ವೇಳೆ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಹೈಕೋರ್ಟ್ ಪೀಠ, ವೈಮನಸ್ಯ ಇದ್ದರೂ ಒಂದೇ ಮನೆಯಲ್ಲಿರುವುದು ಅವರ ಸುಸಂಸ್ಕೃತಿ ತೋರುತ್ತದೆ ಅಂತ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದೇ ಮನೆಯಲ್ಲಿದ್ದುಕೊಂಡೇ ವಿಚ್ಛೇದನ ಕೋರಿ ಪತಿ ಹಾಗೂ ಪತ್ನಿ ಕೌಟುಂಬಿನ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಅರ್ಜಿ ಸಲ್ಲಿಸಿದ್ದರೂ ಒಂದೇ ಮನೆಯಲ್ಲಿ ಪತಿ, ಪತ್ನಿ ವಾಸಿಸುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಸಮ್ಮತಿಯ ವಿಚ್ಚೇದನ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್ ಮೆಟ್ಟಿಲೇರಿತ್ತು.ಇಲ್ಲಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಪೀಠ, ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ಪರಸ್ಪರ ಸಮ್ಮತಿ ವಿಚ್ಚೇದನ ನಿರಾಕರಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಅಲ್ಲದೆ, ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದುಪಡಿಸಿದ ಹೈಕೋರ್ಟ್ ಮತ್ತೆ ಅಲ್ಲಿಗೇ ಪ್ರಕರಣ ಮರಳಿಸಿದೆ. ಪರಸ್ಪರ ಒಪ್ಪಿಗೆಯ ವಿಚ್ಚೇದನ ಅರ್ಜಿ, ಮಧ್ಯಸ್ಥಿಕೆದಾರರ ವರದಿ ಆಧರಿಸಿ ತೀರ್ಮಾನ ಕೈಗೊಳ್ಳುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!