April 6, 2026
Monday, April 6, 2026
spot_img

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಆರಂಭದಲ್ಲಿ ಪರಸ್ಪರ ಸಮ್ಮತಿ ಮೇರೆಗೆ ಇಬ್ಬರ ನಡುವೆ ಸಂಬಂಧ ಚೆನ್ನಾಗಿದ್ದು, ಕೊನೆಗೆ ಯಾವುದೇ ಕಾರಣಕ್ಕೆ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅದು ಅಪರಾಧವಲ್ಲ ಎಂದು ತೀರ್ಪು ನೀಡಿದೆ.

ಕಳೆದ ವರ್ಷ ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿ ಭೇಟಿ ಬಳಿಕ ಅದೇ ದಿನ ಒಯೋ ರೂಮ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಹೇಳಿ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಮಹಿಳೆಯೊಬ್ಬರು ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ಸಾಂಪ್ರಸ್ ಆಂಥೋಣಿ ಎನ್ನುವಾತನ ಜೊತೆ ಒಂದು ವರ್ಷಗಳ ಕಾಲ ಆತ್ಮಿಯವಾಗಿದ್ದರು. ಬಳಿಕ ಅದೇನಾಯ್ತೋ ಏನೋ ಬಳಿಕ ಮಹಿಳೆ, ಸಾಂಪ್ರಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಾಟ್ಸಪ್​ ನಲ್ಲಿ ಇಬ್ಬರು ಪರಸ್ಪರ ಚಾಟಿಂಗ್ ಮಾಡಿದ್ದು, ಹಾಗೇ ಫೋಟೋ, ವಿಡಿಯೋಗಳನ್ನೂ ವಿನಿಮಯ ಮಾಡಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಳಿಕ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !