ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯ ಕಾಣಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿಕೆ ನೀಡಿದ್ದರು. ಇದನ್ನು ಆಶೀರ್ವಾದವಾಗಿ ಪರಿಗಣಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಅಂತ್ಯವಾಗಲಿದೆ ಎಂದು ಹಿರಿಯರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ಅವರು ನಮಗಿಂತ ಹಿರಿಯರು. ಅವರ ಶಾಪವನ್ನು ಆಶೀರ್ವಾದ ಎಂದು ಸ್ವೀಕರಿಸಿದ್ದೇನೆ. ಅವರಿಗೆ ಹಾಗೂ ಅವರ ಪಕ್ಷಕ್ಕೆ ದೀರ್ಘ ಕಾಲ ಆಯೋಗ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.