ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಹರಿಯಾಣದ ಪಾಣಿಪತ್‌ನಿಂದ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಜೂನ್ 1 ರಂದು ಪನ್ವೇಲ್‌ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ನಾಲ್ವರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮುನ್ನ ಏಪ್ರಿಲ್‌ನಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟನ ಮನೆಯ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಂಧಿತ ಆರೋಪಿ ಹರಿಯಾಣ ಮೂಲದ ವ್ಯಕ್ತಿಯಾಗಿದ್ದು ಆತನನ್ನು ನವಿ ಮುಂಬೈಗೆ ಕರೆತರಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಾಗಿ ಕಳೆದ 3 ತಿಂಗಳಿನಿಂದ ಹುಡುಕಾಟ ನಡೆದಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ತನ್ನನ್ನು ಮತ್ತು ಕುಟುಂಬ ಸದಸ್ಯರನ್ನು ಕೊಲ್ಲುವ ಉದ್ದೇಶದಿಂದ ತನ್ನ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಸಂಪತ್ ನೆಹ್ರಾ, ಗೋಲ್ಡಿ ಬ್ರಾರ್ ಸೇರಿದಂತೆ 17ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ ಎಂದು ನವಿ ಮುಂಬೈ ಪೊಲೀಸರು ತಿಳಿಸಿದ್ದಾರೆ.