ಖಲಿಸ್ತಾನಿ ಉಗ್ರ ಪನ್ನುನ್‌ ಹತ್ಯೆಗೆ ಸಂಚು: ಅಮೆರಿಕ ಆರೋಪಕ್ಕೆ ಭಾರತ ಪ್ರತಿಕ್ರಿಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ನನ್ನು (Gurpatwant Singh Pannun) ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ಅಮೆರಿಕ ಆರೋಪದ ಬೆನ್ನಲ್ಲೇ ಭಾರತ ಸರ್ಕಾರ ಪ್ರತಿಕ್ರಿಯಿಸಿದೆ.

ಭಾರತದ ಪ್ರಜೆ ನಿಖಿಲ್ ಗುಪ್ತಾ (Nikhil Gupta) ಎಂಬುವರು ಖಲಿಸ್ತಾನಿ ಉಗ್ರ, ಕೆನಡಾ, ಅಮೆರಿಕ, ಬ್ರಿಟನ್ ಸೇರಿ ಹಲವು ದೇಶಗಳಲ್ಲಿ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಗುರುಪತ್ವಂತ್ ಸಿಂಗ್ ಪನ್ನುನ್ನನ್ನು (Gurpatwant Singh Pannun) ಅಮೆರಿಕದಲ್ಲಿಯೇ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಅಮೆರಿಕ ಆರೋಪಿಸಿತ್ತು. ಈ ಆರೋಪಕ್ಕೆ ಭಾರತ ಪ್ರತಿಕ್ರಿಯೆ ನೀಡಿದ್ದು, ಇದೊಂದು ಕಳವಳಕಾರಿ ವಿಷಯವಾಗಿದೆ . ಅಲ್ಲದೆ, ಭಾರತದ ನೀತಿಗೆ ಇದು ವಿರುದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಹೇಳಿದ್ದಾರೆ.

ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತದ ಪ್ರಜೆ ಸಂಚು ರೂಪಿಸಿದ್ದಾರೆ ಎಂಬ ವಿಷಯವಳು ಆತಂಕ ಹುಟ್ಟಿಸುವಂತಿದೆ.ಇಂತಹ ಪ್ರಕರಣಗಳು ಭಾರತದ ನೀತಿಗೆ ವಿರುದ್ಧವಾಗಿವೆ. ಅಲ್ಲದೆ, ಭದ್ರತೆ ವಿಷಯದಲ್ಲಿ ಭಾರತವು ಅಮೆರಿಕಕ್ಕೆ ಸಕಲ ರೀತಿಯಲ್ಲಿ ಸಹಕಾರ ನೀಡುತ್ತದೆ. ಸಹಕಾರ ತತ್ವದಲ್ಲಿ ಅಮೆರಿಕವು ಭಾರತಕ್ಕೆ ಅಪರಾಧಿಗಳು, ಉಗ್ರರು, ಶಾರ್ಪ್ಶೂಟರ್ಗಳ ಕುರಿತು ಮಾಹಿತಿ ನೀಡಿದೆ. ನಾವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

ಭದ್ರತೆ ಹಾಗೂ ಸ್ಥಿರತೆ ವಿಚಾರದಲ್ಲಿ ಅಮೆರಿಕಕ್ಕೆ ಭಾರತವು ಸಕಲ ರೀತಿಯಲ್ಲಿ ಸಹಕಾರ ನೀಡುತ್ತದೆ. ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿಯ ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದು ಭದ್ರತೆಗೆ ಸಂಬಂಧಿಸಿದ ವಿಚಾರವಾದ ಕಾರಣ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಆಗುವುದಿಲ್ಲಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!