ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ರೌಡಿ ನಾಗನ (Wilson Garden Rowdy Naga) ಕೊಲೆಗೆ ಸಂಚು ರೂಪಿಸಿದ ಸುನೀಲ್ ಅಲಿಯಾಸ್ ಸೈಲೆಂಟ್ ಸುನೀಲ್ (Sunil @ Silent Sunil) ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.
ತನ್ನ ವಿರುದ್ಧ ದಾಖಲಾದ ಪ್ರಕರಣ ರದ್ದು ಕೋರಿ ಸೈಲೆಂಟ್ ಸುನೀಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ವಿಚಾರಣೆ ನಡೆಸಿದ ಕೋರ್ಟ್, ಸುನೀಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತು.
ವಿಲ್ಸನ್ ಗಾರ್ಡನ್ ರೌಡಿ ನಾಗನ ಕೊಲೆಗೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಆರೋಪಿ ಸಮೀವುಲ್ಲಾ ಖಾನ್ ಎಂಬಾತನ ಹೇಳಿಕೆ ಆಧರಿಸಿ ಪೊಲೀಸರು ತನ್ನನ್ನು ವಿನಾಕಾರಣ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಹೀಗಾಗಿ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಮಾಡಬೇಕು ಎಂದು ಕೋರಿ ಸೈಲೆಂಟ್ ಸುನೀಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು.