Sunday, January 11, 2026

ಸ್ಪೋಟಕ ಬಳಸಿ ಕಾಡು ಪ್ರಾಣಿಗಳ ಹತ್ಯೆಗೆ ಸಂಚು: ಓರ್ವನ ಬಂಧನ

ಹೊಸದಿಗಂತ ವರದಿ ತುಮಕೂರು:

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ವಲಯದ ಪಟ್ಟದೇವರ ಕೆರೆ ಅರಣ್ಯ ಪ್ರದೇಶದಲ್ಲಿ ಸಿಡಿಮದ್ದುಗಳನ್ನು ಬಳಸಿ ಕಾಡುಪ್ರಾಣಿಗಳನ್ನು ಹತ್ಯೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ವಲಯ ಅರಣ್ಯ ಅಧಿಕಾರಿ ಮಧು.ಕೆ.ಎಲ್ ಹಾಗೂ ಉಪ ಅರಣ್ಯ ವಲಯ ಅಧಿಕಾರಿ ಪ್ರದೀಪ್ ಮತ್ತು ಅರಣ್ಯ ಪಾಲಕ ಸಿಬ್ಬಂದಿಗಳು ಗಸ್ತುಮಾಡಿ ಬಂದಿಸುವಲ್ಲಿ ಯಶಸ್ವಿ ಆಗಿದ್ದು, ಮತ್ತೊಬ್ಬ ವ್ಯಕ್ತಿಯು ಪರಾರಿಯಾಗಿದ್ದಾನೆ.

ಆರೋಪಿಯಿಂದ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಾಗಿದೆ.

error: Content is protected !!