ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲು ಹರಿದು ಕಾನ್‌ಸ್ಟೆಬಲ್ ಒಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದಿದೆ.
ಇದರಿಂದ ರೈಲ್ವೆ ಹಳಿ ಕೆಳಗೆ ಬಿದ್ದ ಅವರ ಮೇಲೆ ರೈಲು ಹರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.