ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ, ತನ್ನಿಬ್ಬರು ಮಕ್ಕಳನ್ನು ಕೊಂದು ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಾನ್ಸ್‌ಟೇಬಲ್‌ನ ಇಡೀ ಕುಟುಂಬ ಸಾವನ್ನಪ್ಪಿದ ಘಟನೆ ಸ್ಥಳೀಯರ ಮನಸ್ಸನ್ನು ಕದಲಿಸಿದೆ.
ಟೂಟೌನ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ವೆಂಕಟೇಶ್ವರಲು ಕಡಪಾದಲ್ಲಿನ ಸಹಕಾರಿ ಕಾಲೋನಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಈ ವೇಳೆ ವೆಂಕಟೇಶ್ವರಲು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಬಂದೂಕಿನಿಂದ ತನ್ನ ಹೆಂಡತಿ ಮತ್ತು ಮಕ್ಕಳನ್ನು ಹೊಡೆದು ಸಾಯಿಸಿ, ನಂತರ ಅದೇ ಬಂದೂಕಿನಿಂದ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಕಾನ್‌ಸ್ಟೆಬಲ್ ವೆಂಕಟೇಶ್ವರಲು ಕುಟುಂಬ ಆಗಮಿಸಿದ್ದು, ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಕುಟುಂಬದವರ ಸಾವಿಗೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.