ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅನ್ನು ಸಸ್ಪೆಂಡ್ ಮಾಡಿ ಪೂರ್ವ ವಿಭಾಗದ ಡಿಸಿಪಿ ಬಿ.ದೇವರಾಜ್ರಿಂದ ಆದೇಶ ಹೊರಡಿಸಲಾಗಿದೆ.
ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಕಮಿನಷರ್ ಸೀಮಂತ್ ಕುಮಾರ್, ಆಯಾ ಠಾಣೆಗಳಲ್ಲಿ ಎಲ್ಲರನ್ನ ಖುದ್ದು ವಿಚಾರಣೆ ಮಾಡಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಡಿಸಿಪಿ ಮತ್ತು ಎಸಿಪಿಗಳಿಗೆ ಸೂಚಿಸಿದ್ದಾರೆ.
ಹಾಡಹಗಲೇ ಹಣ ಲೂಟಿ ಹೊಡೆಯಲು ಗೋವಿಂದಪುರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸಾಥ್ ನೀಡಿದ್ದ. ಈ ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗಿದೆ. ಇತನೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರವು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.

