ಪೊಲೀಸ್ ಅಧಿಕಾರಿಯನ್ನೇ ಗುಂಡಿಟ್ಟು ಕೊಂದ ಕಾನ್ಸ್ ಟೇಬಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಮೊಂಗ್‌ಬಂಗ್ ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.

ಮೊಂಗ್‌ಬಂಗ್ ಪೊಲೀಸ್‌ ಪೋಸ್ಟ್‌ನಲ್ಲಿ ಕಾನ್‌ಸ್ಟೆಬಲ್ ಬಿಕ್ರಮ್‌ಜಿತ್ ಸಿಂಗ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಷಹಜಹಾನ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಾನ್ಸ್‌ಟೇಬಲ್‌ ಸಬ್ ಇನ್‌ಸ್ಪೆಕ್ಟರ್ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಇದರಿಂದ ಸಬ್ ಇನ್‌ಸ್ಪೆಕ್ಟರ್ ಷಹಜಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣ ಆರೋಪಿ ಕಾನ್‌ಸ್ಟೆಬಲ್‌ನನ್ನು ಇತರ ಪೊಲೀಸರು ಬಂಧಿಸಿದ್ದಾರೆ.

ಜನಾಂಗೀಯ ಹಿಂಸಾಚಾರದಿಂದ ನಲಗುತ್ತಿರುವ ಮಣಿಪುರದ ಭಾಗದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!