Saturday, June 25, 2022

Latest Posts

ತುಮಕೂರು ಜಿಲ್ಲೆಯಲ್ಲಿ ನಿರಂತರ ಮಳೆ: ಸುಮಾರು 1 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿ

ಹೊಸದಿಗಂತ ವರದಿ,ತುಮಕೂರು:

ಪ್ರಾಥಮಿಕ ವರದಿ ಪ್ರಕಾರ ಜಿಲ್ಲೆಯಲ್ಲಿ ಸತತ ಮಳೆಯಿಂದ ಸುಮಾರು 90ಸಾವಿರ ಹೆಕ್ಟೇರ್ ನಿಂದ 1ಲಕ್ಷ ಹೆ.ವರೆಗೆ ಕೃಷಿ ಬೆಳೆ ಹಾನಿಗೊಳಗಾಗಿದ್ದು, ಬೆಳೆ ನಷ್ಟಕ್ಕೊಳಗಾದ ನೈಜ ಫಲಾನುಭವಿಗಳಿಗೆ ಕೂಡಲೇ ಪರಿಹಾರ ಒದಗಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಸಭೆ ನಡೆಸಿ ಮಾತನಾಡಿದ ಅವರು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ನಡೆಸಿರುವ ಪ್ರಾಥಮಿಕ ಸಮೀಕ್ಷೆಯನುಸಾರ ಜಿಲ್ಲೆಯಲ್ಲಿ 90ಸಾವಿರ ಹೆ. ನಿಂದ 1ಲಕ್ಷ ಹೆ.ವರೆಗೆ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ 400 ರಿಂದ 450 ಮನೆಗಳು ಭಾಗಶಃ/ಪೂರ್ಣ ಹಾನಿಯಾಗಿದೆ ಎಂದು ತಹಸೀಲ್ದಾರರು ಪ್ರಾಥಮಿಕ ವರದಿ ನೀಡಿದ್ದು, ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳ ಫಲಾನುಭವಿಗಳಿಗೆ ಕೂಡಲೇ ಪರಿಹಾರ ನೀಡಬೇಕು ಎಂದರಲ್ಲದೇ, ಸೂಕ್ತ ಕಾಲದಲ್ಲಿ ಪರಿಹಾರದ ಸೌಲಭ್ಯಗಳು ಸರಿಯಾದ ಕ್ರಮದಲ್ಲಿ ತಲುಪುವಂತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೆರೆ ಹಾನಿ ಕುರಿತು ಸುಳ್ಳು ಮಾಹಿತಿ ನೀಡಿದಲ್ಲಿ ಕ್ರಮ
ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಸಂಭವಿಸಿರುವ ನೆರೆ ಹಾನಿ ಕುರಿತಂತೆ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಶಾಲೆ, ರಸ್ತೆ, ಕೆರೆ, ಅಂಗನವಾಡಿ ಕಟ್ಟಡ ಸೇರಿದಂತೆ ಹಾನಿಗೆ ಒಳಗಾಗಿರುವ ಸಾರ್ವಜನಿಕ ಆಸ್ತಿಗಳ ಬಗ್ಗೆ 3 ದಿನಗಳಲ್ಲಿ ಮಾಹಿತಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ಕೆ. ವಿದ್ಯಾಕುಮಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಘು ಸೇರಿದಂತೆ ಜಿಲ್ಲೆಯ ಉಪವಿಭಾಗಾಧಿಕಾರಿ, ತಹಸೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss