Sunday, August 14, 2022

Latest Posts

15ರ ಬಾಲಕಿ ಮೇಲೆ 30 ಪುರುಷರಿಂದ ನಿರಂತರ ಅತ್ಯಾಚಾರ: 24 ಮಂದಿ ಅರೆಸ್ಟ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮುಂಬೈನಲ್ಲಿ 30 ಮಂದಿ ನೀಚರು 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ಕಳೆದ ಒಂಬತ್ತು ತಿಂಗಳಿನಿಂದ ವಿವಿಧ ಸ್ಥಳಗಳಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರು ಸೇರಿ 24 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿಯಲ್ಲಿ ಬಾಲಕಿ ಮೇಲೆ ಮೊದಲ ಬಾರಿಗೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋ ಮಾಡಿದ ಪಾಪಿ ಬ್ಲಾಕ್‌ಮೇಲ್ ಮಾಡಿ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.
ಇಷ್ಟೇ ಅಲ್ಲದೆ ಈ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಆತ ಕಳಿಸಿದ್ದು, ಅವರು ಕಾಮತೃಷೆಗೆ ಬಾಲಕಿಯನ್ನು ಬಳಸಿಕೊಂಡಿದ್ದಾರೆ. ಮುಂಬೈನ ವಿವಿಧ ಸ್ಥಳಗಳಲ್ಲಿ ಕನಿಷ್ಠ ಆರು ಬಾರಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಬುಧವಾರ ರಾತ್ರಿ ಇಂಥದ್ದೇ ಶೋಷಣೆಗೆ ಒಳಪಟ್ಟ ಬಾಲಕಿ ದೈಹಿಕ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಪೊಲೀಸರಿಗೆ ಬಾಲಕಿ ದೂರು ನೀಡಿದ್ದು, ಪೊಲೀಸರು 24 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಇವರೆಲ್ಲರೂ ಆಕೆಗೆ ಪರಿಚಯ ಇರುವವರೇ ಆಗಿದ್ದಾರೆ. ಇನ್ನುಳಿದ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss