ಅಜಂ ಖಾನ್ ಅನರ್ಹದಿಂದ ತೆರವಾದ ಕ್ಷೇತ್ರ: ನ.10ರವರೆಗೆ ಉಪಚುನಾವಣೆಗೆ ಅಧಿಸೂಚನೆ ನೀಡದಂತೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಮಾಜವಾದಿ ಪಕ್ಷದ ಶಾಸಕ ಅಜಂ ಖಾನ್ ಅವರನ್ನು ಅನರ್ಹಗೊಳಿಸಿದ ಬಳಿಕ ತೆರವಾದ ಉತ್ತರ ಪ್ರದೇಶದ ರಾಂಪುರ ಸದರ್ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕ ಮಹತ್ವದ ನಿರ್ದೇಶನ ನೀಡಿದೆ.

ಸುಪ್ರೀಂ ಈ ಕುರಿತು ಆಯೋಗಕ್ಕೆ ನವೆಂಬರ್ 10 ರವರೆಗೆ ಅಧಿಸೂಚನೆಯನ್ನು ಹೊರಡಿಸದಂತೆ ನಿರ್ದೇಶನ ನೀಡಿದೆ.

ಈ ಬಗ್ಗೆ ಖಾನ್ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ವಿಶೇಷ ಸೆಷನ್ಸ್ ನ್ಯಾಯಾಲಯಕ್ಕೆ ಗುರುವಾರವೇ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿದ್ದಾರೆ.

ಅಕ್ಟೋಬರ್ 27 ರಂದು, ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ ರಾಂಪುರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿತು. 2019 ರ ಪ್ರಕರಣದಲ್ಲಿ ರಾಂಪುರದ ಎಂಪಿ-ಎಂಎಲ್ಎ ನ್ಯಾಯಾಲಯವು ಶಾಸಕರಿಗೆ ಜಾಮೀನು ನೀಡಿತು. ಅಕ್ಟೋಬರ್ 28 ರಂದು ಉತ್ತರ ಪ್ರದೇಶ ವಿಧಾನಸಭೆಯ ಸೆಕ್ರೆಟರಿಯೇಟ್ ಖಾನ್ ಅವರನ್ನು ಸದನದಿಂದ ಅನರ್ಹಗೊಳಿಸುವುದಾಗಿ ಘೋಷಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!