ಸುಪ್ರೀಂಕೋರ್ಟ್‌ನಲ್ಲಿ ನಾಳೆ ಸಂವಿಧಾನ ದಿನಾಚರಣೆ: ಪ್ರಧಾನಿ ಮೋದಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಳೆ (ನವೆಂಬರ್ 26 ರಂದು) ಬೆಳಿಗ್ಗೆ 10 ಗಂಟೆಗೆ ಸುಪ್ರೀಂಕೋರ್ಟ್‌ನಲ್ಲಿ ನಡೆಯಲ್ಲಿರುವ ಸಂವಿಧಾನ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಇ-ಕೋರ್ಟ್ ಯೋಜನೆಯಡಿ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯು ನ್ಯಾಯಾಲಯಗಳ ಐಸಿಟಿ ಸಕ್ರಿಯಗೊಳಿಸುವಿಕೆಯ ಮೂಲಕ ದಾವೆದಾರರು, ವಕೀಲರು ಮತ್ತು ನ್ಯಾಯಾಂಗಕ್ಕೆ ಸೇವೆಗಳನ್ನು ಒದಗಿಸುವ ಪ್ರಯತ್ನವಾಗಿದೆ. ಪಿಎಂ ಮೋದಿ ಅವರು ಪ್ರಾರಂಭಿಸುತ್ತಿರುವ ಉಪಕ್ರಮಗಳಲ್ಲಿ ವರ್ಚುವಲ್ ಜಸ್ಟೀಸ್ ಕ್ಲಾಕ್, ಜಸ್ಟಿಸ್ ಮೊಬೈಲ್ ಅಪ್ಲಿಕೇಶನ್ 2.0, ಡಿಜಿಟಲ್ ಕೋರ್ಟ್ ಮತ್ತು S3WaaS ವೆಬ್‌ಸೈಟ್‌ಗಳು ಸೇರಿವೆ ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!