ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದ್ದಾರೆ.

ಸಂವಿಧಾನ ಜಾರಿಯಾಗಿ 75ನೇ ವರ್ಷ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ ನಗರದ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಭಾಗಿ ಮಾತನಾಡಿದ ಅವರು, ಮೋದಿ ಸರ್ಕಾರದಿಂದ ಬಂದಿರುವ ಆತಂಕವನ್ನು ಜನರಿಗೆ ತಿಳಿಸಿದ್ದೇವೆ. ಡಾ.ಬಿ.ಅರ್.ಅಂಬೇಡ್ಕರ್​ ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಟ್ಟಿದ್ದಾರೆ. ಸಂವಿಧಾನ ಜಾರಿಯಾದ ದಿನದಿಂದ ಆಂತರಿಕವಾಗಿ ಬಿಜೆಪಿ ವಿರೋಧಿಸುತ್ತಿದೆ ಎಂದು ಕಿಡಿಕಾರಿದಾರೆ.

ಬಿಜೆಪಿ, ಆರ್​ಎಸ್​ಎಸ್​ ಸಂವಿಧಾನವನ್ನು ಗೌರವಿಸುವುದಿಲ್ಲ. ಮಹಿಳೆಯರು, ಕಾರ್ಮಿಕರು, ಹಿಂದುಳಿದವರ ವಿರುದ್ಧ ಬಿಜೆಪಿ ಪಕ್ಷ ಇರುವುದು. ನರೇಂದ್ರ ಮೋದಿ ಸಂಪುಟದಲ್ಲಿ ಅನಂತಕುಮಾರ್​ ಹೆಗಡೆ ಮಂತ್ರಿಯಾಗಿದ್ದರು. ಹೆಗಡೆ ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಿಸಲು ಎಂದು ಹೇಳಿದ್ದರು. ಅನಂತಕುಮಾರ್​ ಹೆಗಡೆ ವಿರುದ್ಧ ಮೋದಿ, ಅಮಿತ್ ಶಾ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದ್ದಾರೆ.

ಸಂವಿಧಾನ ಬದಲಿಸಿದರೆ ರಕ್ತಪಾತ ಆಗುತ್ತೆ ಎಂದು ಹೆದರಿ ಸುಮ್ಮನಿದ್ದಾರೆ. ನಮ್ಮ ಸಂವಿಧಾನ ಬದಲಾವಣೆಯಾದರೆ ನಾವು ಬದುಕಲು ಸಾಧ್ಯವಿಲ್ಲ. ಪರೋಕ್ಷವಾಗಿ ಸಂವಿಧಾನ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಎಂಪಿ ಚುನಾವಣೆಯಲ್ಲಿ ಸಂವಿಧಾನಕ್ಕೆ ವಿರುದ್ಧ ಇರುವ ಬಿಜೆಪಿ ಸೋಲಿಸಿ ಎಂದಿದ್ದಾರೆ.

ಯಾವ ಜನ ಅವಶ್ಯಕತೆ ವಂಚಿತರಾಗಿದ್ದಾರೆ ಅವರು ಸ್ವಾಭಿಮಾನದಿಂದ ಬದುಕವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ. ಈ ಬಾರಿ ಆರ್ಥಿಕ, ಸಾಮಾಜಿಕ ಶಕ್ತಿ ಇಲ್ಲದವರಿಗೆ ಶಕ್ತಿ ನೀಡಲು ಅಧಿಕಾರಕ್ಕೆ ಬಂದ ಐದು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಬಿಜೆಪಿಯವರು ನುಡಿದಂತೆ ನಡೆದಿಲ್ಲ. 1 ಕೋಟಿ 20 ಲಕ್ಷ ಜನ ಗ್ಯಾರಂಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ. ಯಾರು ಅವಕಾಶ ವಂಚಿತರಾದರಾಗಿದ್ದಾರೆ ಅವರು ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ.ವಿರೋಧಿಗಳು ಗ್ಯಾರಂಟಿ ಯೋಜನೆ ದಿವಾಳಿ ಆಗುತ್ತೆ ಎಂದಿದ್ದರು. ನರೇಂದ್ರ ಮೋದಿ ಅವರೇ ಹೇಳಿದ್ದರು. ಆದರೆ ಈಗ ಮೋದಿ ಗ್ಯಾರಂಟಿ ಅಂತಾರೆ. ಬಿಜೆಪಿವರು ಮನೆ ದೇವರು ಸುಳ್ಳು. ಮೋದಿ, ರಾಜ್ಯದ ಬಿಜೆಪಿ ನಾಯಕರು ಸುಳ್ಳು ಹೇಳಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರೋಧಿಗಳು. ಮನುಸ್ಮೃತಿಗೆ ಹತ್ತಿರವಾದವರು ಬಿಜೆಪಿ. ಸಂವಿಧಾನ ರದ್ದು ಮಾಡಿದರೆ ರಕ್ತ ಪಾತ ಆಗುತ್ತೆ ದುರ್ಬಲ ಮಾಡುತ್ತಿದ್ದಾರೆ. ವಿರೋಧಿಗಳನ್ನು ಕಿತ್ತು ಹಾಕಿದರೆ ಸಂವಿಧಾನ ಉಳಿಯುತ್ತೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!