Thursday, June 30, 2022

Latest Posts

ಮಧುರೈಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: ಕಾರ್ಮಿಕ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡಿನ ಮಧುರೈಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗ ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಘಡದಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೇತೃತ್ವ ವಹಿಸಿದರು.
ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ನ ಕಾಂಕ್ರೀಟ್ ಬ್ಲಾಕ್ ಬಿದ್ದು,ಲವರು ಗಾಯಗೊಂಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಎಸ್. ಅನೀಶ್ ಶೇಖರ್ ಮಾಹಿತಿ ನೀಡಿದ್ದು, ‘ಉತ್ತರ ಪ್ರದೇಶದ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಬೇರೆ ಯಾರೂ ಸಿಲುಕಿಲ್ಲ. ಉಳಿದಿರುವ ಏಳು ಕಿ.ಮೀ. ದೂರದ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸಲಾಗುವುದು. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss