ಕೊಳಚೆ ನಿರ್ಮೂಲನಾ ಮಂಡಳಿಯಿಂದ ರಾಜ್ಯದಲ್ಲಿ 1.8 ಲಕ್ಷ ಮನೆ ನಿರ್ಮಾಣ: ಸಚಿವ ಮೋಮಣ್ಣ

ಹೊಸದಿಗಂತ ವರದಿ, ಹಾವೇರಿ
 ರಾಜ್ಯದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ 1.8 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಫೆಬ್ರುವರಿ ತಿಂಗಳಲ್ಲಿ 80 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತದೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು.
ಜಿಲ್ಲೆಯ ಶಿಗ್ಗಾವ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಶುಕ್ರವಾರ ವಸತಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ವಸತಿ ಯೋಜನೆ ಕಾಮಗಾರಿಗಳ ಪರಿವೀಕ್ಷಣೆ ಮಾಡಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು.
ಬಡವರಿಗೆ ಗುಣಮಟ್ಟದ ಮನೆಗಳನ್ನು ನಿರ್ಮಿಸಿ ಕೊಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಬಂಕಾಪುರ, ಸವಣೂರು ಹಾಗೂ ಶಿಗ್ಗಾವಿ ತಾಲ್ಲೂಕುಗಳಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಒಂದು ಸಾವಿರ ಮನೆಗಳನ್ನು ನಿರ್ಮಿಸಲಾಗಿದ್ದು, ಡಿಸೆಂಬರ್ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ ಎಂದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ಎರಡು ಸಾವಿರ ಮನೆಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲಿ ಹೊಸದಾಗಿ 7 ಸಾವಿರ ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶವನ್ನು ಮುಂದಿನ ತಿಂಗಳು ನೀಡಲಾಗುತ್ತದೆ ಎಂದು ತಿಳಿಸಿದರು.
ವಸತಿ ಯೋಜನೆಗಳಲ್ಲಿ ಮನೆ ಪಡೆಯಲು ಈ ಹಿಂದೆ ಇದ್ದ ಅನೇಕ ನಿಯಮಗಳನ್ನು ಬದಲಾವಣೆ ಮಾಡಲಾಗಿದ್ದು, ಬಿಪಿಎಲ್ ಪಡಿತರ ಚೀಟಿ ಹೊಂದಿದ ಎಲ್ಲರೂ ಮನೆ ನಿರ್ಮಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ ಸಿಇಓ ಮಹಮ್ಮದ ರೋಷನ್, ಇಂಜೀಯರ ಶ್ರೀನಿವಾಸ, ಮಹಾಂತೇಶ, ಹೆಬಿಟೆಟ್ ಸಂಸ್ಥೆಯ ಅಧಿಕಾರಿಗಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!