spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ ಆವೃತ್ತಿ: 3.61 ಲಕ್ಷ ಮನೆ ನಿರ್ಮಾಣ ಕಾಮಗಾರಿಗೆ ಅನುಮತಿ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಮಂತ್ರಿ ಆವಾಸ್ ಯೋಜನೆ-ನಗರ ಆವೃತ್ತಿ ಅಡಿಯಲ್ಲಿ ದೇಶದಾದ್ಯಂತ 3. 61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದು, ತ್ವರಿತವಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ.
ಆವಾಸ್ ಯೋಜನೆಯ ಮೇಲ್ವಿಚಾರಣಾ ಸಮಿತಿ ಹಾಗೂ ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗ ಶಂಕರ್ ಮಿಶ್ರಾ ನೇತೃತ್ವದಲ್ಲಿ ಸಭೆ ನಡೆದಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಮುಂದಿನ ದಿನಗಳಲ್ಲಿ ಯಾವುದೇ ವಿಳಂಬವಿಲ್ಲದೆ ಕೆಲಸ ಪೂರ್ಣಗೊಳಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.
ದೇಶದ 17 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ.
ಇದರೊಂದಿಗೆ ಈವರೆಗೆ ಆವಾಸ್ ಯೋಜನೆ ನಗರ ಆವೃತ್ತಿ ಅಡಿಯಲ್ಲಿ 1.41 ಕೋಟಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಇದರಲ್ಲಿ 52.5 ಲಕ್ಷ ಮನೆಗಳು ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ 89 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ ಒಟ್ಟು 7.52 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss