ರಾಜ್ಯದಲ್ಲಿ 6 ಹೈಟೆಕ್ ಸಿಟಿ ನಿರ್ಮಾಣ: ಸಿಎಂ ಬೊಮ್ಮಾಯಿ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುಯಲ್ ಆಗಿ ಉದ್ಘಾಟಿಸಿದ ಬೆಂಗಳೂರು ಟೆಕ್ ಸಮ್ಮಿಟ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ‘ಹೈಟೆಕ್ ಸಿಟಿ’ಗಳಾಗಿ ನಿರ್ಮಿಸುವುದಾಗಿ ಘೋಷಣೆ ಮಾಡಿದರು. ಕಲಬುರಗಿ, ಹುಬ್ಬಳ್ಳಿ – ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ (Tech City) ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ, ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ, ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ . ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ.40 ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ-ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಬೇಕು ಎಂದು ಕರೆ ನೀಡಿದರು.

ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕವಾದ ಕೆಲಸ ಮಾಡಿ ಸರ್ಕಾರಕ್ಕೂ ಆದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. ನಮ್ಮ ಪ್ರಧಾನಿಗಳು ಬಿಐಎಎಲ್‌ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದು ಶ್ಲಾಘಿಸಿದ್ದಾರೆ.

ಪರಿಸರ ಸ್ನೇಹಿ ವಾತಾವರಣ ಅಗತ್ಯ ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ.ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು ಪ್ರತಿ ಕ್ಷಣವೂ ಇಳಿಮುಖವಾಗುತ್ತಿದೆ. ನಾವು ಪರಿಹಾರ ಕಂಡುಕೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದರಿಸಬೇಕಾಗುತ್ತದೆ. ನಮ್ಮ ಪೂರ್ವಜರು ವ್ಯವಸ್ಥಿತವಾದ ಜೀವನ ಮಾಡುತ್ತಿದ್ದರು. ನಾವು ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನೀಡಬೇಕು ಎಂದರು.

ಭವಿಷ್ಯದಿಂದ ನಾವು ಕಳ್ಳತನ ಮಾಡಬಾರದು. ಭವಿಷ್ಯಕ್ಕಾಗಿ ಭೂಮಿಯನ್ನು ಉಳಿಸಬೇಕು. ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಚಿಂತನೆ ಅಗತ್ಯ. ಯಾವುದೇ ತಂತ್ರಜ್ಞಾನ ಬಂದರೂ ಈ ಪರಿಸರವನ್ನು ಉಳಿಸುವ ಗಣ ಹೊಂದಿರಬೇಕು. ಡಿಜಿಟಲ್ ಅಂತರ ವನ್ನು ಕಡಿಮೆ ಮಾಡುವತ್ತಲೂ ನಾವು ಗಮನಹರಿಸಬೇಕು. ಪರಿಸರ ಸ್ನೇಹಿ ವಾತಾವರಣ ಹೊಂದಬೇಕು‌. ಪರಿಸರ ಸ್ನೇಹಿ ತಂತ್ರಜ್ಞಾನ, ನಾವೀನ್ಯತೆ ಹಾಗೂ ಇಕೋ ಇಕನಾಮಿಕ್ಸ್ ನ್ನು ಸಾಧ್ಯವಾಗಿಸಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!