ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ, ಕ್ಷಣಾರ್ಧದಲ್ಲಿ ಛಾವಣಿ ಕುಸಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ನೂತನ ವಿಶೇಷ ಕಟ್ಟಡದ ನೆಲ ಅಂತಸ್ತಿನ ಸೀಲಿಂಗ್ ನಲ್ಲಿ ಪಿಒಪಿ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕೋಟ್ಯಂತರ ರೂಪಾಯಿ ವೆಚ್ಚದ ಪಿಎಂಎಸ್‌ಎಸ್‌ವೈ ಕಟ್ಟಡ ಇದಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಕಿಮ್ಸ್ ಆಡಳಿತ ಸಮಿತಿಯ ವ್ಯವಸ್ಥಾಪಕರು ಮತ್ತು ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ವಿಶೇಷ ಆಸ್ಪತ್ರೆಯನ್ನು ಕಳೆದ ವರ್ಷವಷ್ಟೇ ಕಿಮ್ಸ್ ಸ್ವಾಧೀನಪಡಿಸಿಕೊಂಡ ನಂತರ ಸುಮಾರು 150 ಕೋಟಿ ವೆಚ್ಚದಲ್ಲಿ ವಿಶೇಷ ಆಸ್ಪತ್ರೆಯ ಕಟ್ಟಡವನ್ನು ನಿರ್ಮಿಸಲಾಗಿದೆ. ಕಟ್ಟಡದ ಕೆಳ ಅಂತಸ್ತಿನ ಕಾಮಗಾರಿಯನ್ನು ಕಳೆದ ವರ್ಷ ಪೂರ್ಣಗೊಳಿಸಿ ಆರಂಭಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!