Saturday, April 1, 2023

Latest Posts

ರಾಜ್ಯ ಬಜೆಟ್| ರಾಜ್ಯದಲ್ಲಿ ಹೆಚ್ಚುವರಿಯಾಗಿ 1,230 ಶಾಲಾ ಕೊಠಡಿ ನಿರ್ಮಾಣ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ರಾಜ್ಯದಲ್ಲಿ ಹೆಚ್ಚುವರಿಯಾಗಿ 1,230 ಶಾಲಾ ಕೊಠಡಿ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ರಾಜ್ಯದಲ್ಲಿ 2022-2023ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1,230 ಶಾಲಾ ಕೊಠಡಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದ್ದು, 6 ಇಎಸ್​ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಲಾಗುವುದು. ರಾಜ್ಯದ ಶಿಶುಮರಣ ಪ್ರಮಾಣ ತಗ್ಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!