ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.
ಮಂಗಳವಾರ ಮಧ್ಯಾಹ್ನ ಸುಮಾರು 11:52ರಿಂದ 12:35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ ಸೂರ್ಯವಂಶಿ ಮತ್ತು ತ್ರೇತಾಯುಗದ ಚಿಹ್ನೆಗಳನ್ನು ಇರಿಸಲಾಗಿದೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಭಾರತದ ವಿವಿಧೆಡೆಯ ಆರು ಸಾವಿರ ಪ್ರಮುಖ ಗಣ್ಯರು ಭಾಗವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಭಾರಿ ಸಿದ್ದತೆ ನಡೆದಿದೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ: ನಾಳೆ ಪ್ರಧಾನಿಯಿಂದ ಧಾರ್ಮಿಕ ಧ್ವಜಾರೋಹಣ

