spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಡಾನೆ ಹಾವಳಿ ತಡೆಗೆ ರೈಲ್ವೆಹಳಿ ಬಳಸಿ ಬ್ಯಾರಿಕೇಡ್ ನಿರ್ಮಾಣ: ಸಚಿವ ಉಮೇಶ್ ಕತ್ತಿ

- Advertisement -Nitte

ಹೊಸ ದಿಗಂತ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕಾಡಿನಿಂದ ನಾಡಿಗೆ ಬಂದು ಗದ್ದೆ, ತೋಟಗಳಿಗೆ ದಾಳಿ ಮಾಡುತ್ತಿರುವ ಕಾಡಾನೆಗಳನ್ನು ನಿಯಂತ್ರಿಸಲು 9.516 ಕಿ.ಮೀ. ನಷ್ಟು ದೂರ ಉಪಯೋಗಿತ ರೈಲ್ವೆ ಹಳಿಗಳನ್ನು ಬಳಸಿ ಬ್ಯಾರಿಕೇಡ್ ಅಳವಡಿಸುವ ಗುರಿ ಹೊಂದಲಾಗಿದ್ದು, ಇದುವರೆಗೆ 7.07 ಕಿ.ಮೀ.ಗಳಷ್ಟು ದೂರ ಬ್ಯಾರಿಕೇಡ್ ಅಳವಡಿಸಲಾಗಿದೆ. ಉಳಿದಿರುವ 2.5 ಕಿ.ಮೀ. ದೂರದ ಬ್ಯಾರಿಕೇಡ್ ನಿರ್ಮಾಣಕ್ಕೆ ಪ್ರಸಕ್ತ ಸಾಲಿಗೆ 135.36 ಲಕ್ಷ ರೂ.ಗಳನ್ನು ಒದಗಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ವಿ.ಕತ್ತಿ ಅವರು ತಿಳಿಸಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಕಾಡಾನೆಗಳು ನಾಡಿಗೆ ಬಂದು ಉಪಟಳ ನೀಡುವುದನ್ನು ನಿಯಂತ್ರಿಸಲು ಆನೆ ತಡೆ ಕಂದಕ ನಿರ್ವಹಣೆ, ಸೋಲಾರ್ ತಂತಿ ಬೇಲಿ ನಿರ್ಮಾಣ ಹಾಗೂ ನಿರ್ವಹಣೆ, ತೂಗು ಸೋಲಾರ್ ತಂತಿ ಬೇಲಿ ನಿರ್ಮಾಣ ಹಾಗೂ ನಿರ್ವಹಣೆ, ಉಪಯೋಈಗತ ರೈಲು ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಾಣ, ವನ್ಯ ಪ್ರಾಣಿಗಳಿಗೆ ಕುಡಿಯ ನೀರಿಗಾಗಿ ಕೆರೆ, ಚೆಕ್‍ಡ್ಯಾಂಗಳ ನಿರ್ಮಾಣ ಮತ್ತು ಹಾಲಿ ಇರುವ ಕೆರೆಗಳ ಹೂಳೆತ್ತುವ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದು ವಿವರಿಸಿದರು.
ಕೊಡಗು ಜಿಲ್ಲೆ ವ್ಯಾಪ್ತಿಯ ವಲಯಗಳಲ್ಲಿ ಕಾಡಾನೆ ಹಾವಳಿಯ ತುರ್ತು ನಿರ್ವಹಣೆಗೆ ಕ್ಷಿಪ್ರ ಸ್ಪಂದನ ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸಲಾಗುತ್ತಿದ್ದು, ಆಂಯ್ದ ವಲಯಗಳಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಹಿಮ್ಮೆಟ್ಟಿಸುವ ತಂಡ ರಚಿಸಲಾಗಿದೆ. ಕಾಡಾನೆ ಇರುವಿಕೆ, ಅವುಗಳ ಚಲನವಲನಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಎಸ್‍ಎಂಎಸ್ ಅಲರ್ಟ್ ಸಿಸ್ಟಂ ಕಾರ್ಯ ನಿರ್ವಹಿಸುತ್ತಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಬಾಧಿತ ಗ್ರಾಮಗಳ ಜನರೊಂದಿಗೆ ಸಂಪರ್ಕ ಸಭೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು.
11 ಆನೆಗಳ ಸೆರೆ: ಕೊಡಗು ಜಿಲ್ಲೆಯಲ್ಲಿ 2014ರಿಂದ ಇದುವರೆಗೆ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ 11 ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲಾಗಿದ್ದು, ವೀರಾಜಪೇಟೆ ವಿಭಾಗದಲ್ಲಿ 9 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅವುಗಳ ಚÀಲನವಲನಗಳ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಕೊಡಗು ಜಿಲ್ಲೆಯ ನಾಗರಹೊಳೆ ವ್ಯಾಪ್ತಿಯಲ್ಲಿ ರಕ್ಷಣಾ ಕೆಲಸಗಳಿಗಾಗಿ ಎಸ್‍ಟಿಪಿಎಫ್ ತಂಡ ನೇಮಕ ಮಾಡಿ ರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ವನ್ಯ ಪ್ರಾಣಿಗಳ ರಕ್ಷಣೆಯ ದೃಷ್ಟಿಯಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ 37 ವನ್ಯಪ್ರಾಣಿ ಹತ್ಯೆ ತಡೆ ಶಿಬಿರಗಳನ್ನು ಸ್ಥಾಪಿಸಿ ಪ್ರತಿನಿತ್ಯ ಗಸ್ತು ಮಾಡುವ ಮೂಲಕ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಲಾಗಿದೆ.
ಉಪಶಮನ ಪ್ರತಿಷ್ಠಾನ ಸ್ಥಾಪನೆ: ರಕ್ಷಣಾ ಕಾರ್ಯದ ಸಿಬ್ಬಂದಿಗಳಿಗೆ ಹಾಗೂ ಇಲಾಖಾ ಸಿಬ್ಬಂದಿಗಳಿಗೆ ವಯರ್‍ಲೆಸ್ ವಾಕಿಟಾಕಿ, ಶಸ್ತ್ರಾಸ್ತ್ರ, ಆಹಾರ ಸಾಮಾಗ್ರಿಗಳನ್ನು ಒದಗಿಸಿ ಪರಿಣಾಮಕಾರಿಯಾಗಿ ರಕ್ಷಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಮಾನವ –ವನ್ಯಪ್ರಾಣಿ ಸಂಘರ್ಷವನ್ನು ತಡೆಯಲು ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಕೊಡಗು ಮಾನವ –ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನವನ್ನು ವೃತ್ತ ಮಟ್ಟದಲ್ಲಿ ಸ್ಥಾಪಿಸಲಾಗಿದೆ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss