ನಾಳೆ ಕಲಬುರಗಿ ಬಿಜೆಪಿ ಕಾರ್ಯಾಲಯ ಕಟ್ಟಡಕ್ಕೆ ನಳೀನ್‌ ಕುಮಾರ್‌ ಕಟೀಲ್‌ ರಿಂದ ಶಂಕು ಸ್ಥಾಪನೆ

ಹೊಸದಿಗಂತ ವರದಿ ಕಲಬುರಗಿ:

ರಾಷ್ಟ್ರವ್ಯಾಪ್ತಿ ಬಿಜೆಪಿ ಪಕ್ಷ ತನ್ನ ಸ್ವಂತ ಕಟ್ಟಡ ಹೊಂದಬೇಕು ಎಂಬ ಉದ್ದೇಶದಿಂದ  ಮೇ 16 ರಂದು ಮಧ್ಯಾಹ್ನ 3 ಗಂಟೆಗೆ ರಿಂಗ್ ರಸ್ತೆ ಬಳಿ ಇರುವ ಜೇಮಶೆಟ್ಟಿ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಾಲಯ ಕಟ್ಟಡ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾರ್ಯಾಲಯ ಕಟ್ಟಡಗಳ ರಾಜ್ಯ ಸಹ ಸಂಚಾಲಕ ಅಮರನಾಥ್ ಪಾಟೀಲ್ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಸಬಲಗೊಳಿಸುವ ನಿಟ್ಟಿನಲ್ಲಿ ಸದ್ಯ ರಾಜ್ಯದಲ್ಲಿ 10 ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಹೊಂದಿ ಕಾರ್ಯನಿರ್ವಹಿಸುತ್ತಿದ್ದು,11 ಜಿಲ್ಲಾ ಭವನ ಪೂರ್ಣಗೊಳ್ಳುವ ಹಂತದಲ್ಲಿದ್ದು, ಇನ್ನೂ 2-3 ತಿಂಗಳುಗಳಲ್ಲಿ ಉದ್ಘಾಟನೆಗೊಳ್ಳಲಿವೆ. ಅಲ್ಲದೇ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ. ಕಲಬುರಗಿ,ಲಿ ಇದೇ ಸೋಮವಾರ ಕಾರ್ಯಾಲಯದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ ಎಂದು ಅವರು ತಿಳಿಸಿದರು.

ಕಲಬುರಗಿಯಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಭವನ ನಿವೇಶನವು 10890 ಚದರ ವಿಸ್ತರಣದ ಅಂದಾಜು 2.5 ಕೋಟಿ ರು. ವೆಚ್ಚದಲ್ಲಿ ಮೂರು ಮಹಡಿಯ ಕಟ್ಟಡ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದ್ದು, ನೈಸರ್ಗಿಕ ವೆಂಟಿಲೇಶನ್, ವಾಸ್ತುಗೆ ಆದ್ಯತೆ. ಅತ್ಯಾಧುನಿಕ ತಂತ್ರಜ್ಞಾನ, ವರ್ಚುವಲ್ ರ‍್ಯಾಲಿ, ಸಂವಹನ, ಮಾಧ್ಯಮ ಸಂವಾದ, ಸಭಾಂಗಣ, ಡಿಜಿಟಲ್ ಲೈಬ್ರರಿ, ಸಭೆ ಬೈಟಕ್ ಸಭಾಂಗಣ, ಪದಾಧಿಕಾರಿಗಳ ಕೊಠಡಿಗಳು, ವಸತಿ ಸೌಲಭ್ಯ, ಸಾರ್ವಜನಿಕ ಅಹವಾಲು ಆಲಿಸಲು ಸಂಸದರ, ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಕೊಠಡಿ ವ್ಯವಸ್ಥೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಲಭ್ಯವಿರುವ ಸಾಮಗ್ರಿಗಳು ಉಪಯೋಗಿಸಲಾಗುವುದು ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಪ್ರಸನ್ನ, ಮಾದ್ಯಮ ಪ್ರಮುಖರಾದ ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!