ರಾಮಮಂದಿರ ನಿರ್ಮಾಣ ರಾಮರಾಜ್ಯಕ್ಕೆ ನಾಂದಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೇಶದಲ್ಲಿ ರಾಮರಾಜ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ನಾಂದಿಯಾಗಲಿದೆ. ಅಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇಂದು ಛತ್ತೀಸಗಢದ ಕೊಂಟಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ಯಾವುದೇ ಜಾತಿ ಮತ್ತು ಧರ್ಮದ ತಾರತಮ್ಯ ಇಲ್ಲದ ನಿಯಮ. ಇಂತಹ ಆಡಳಿತದಲ್ಲಿ ಬಡವರು, ವಂಚಿತರು ಮತ್ತು ಬುಡಕಟ್ಟು ಸಮುದಾಯದವರು ಸೇರಿದಂತೆ ಎಲ್ಲರಿಗೂ ಯೋಜನೆಗಳ ಪ್ರಯೋಜನಗಳು ತಲುಪುತ್ತವೆ. ಪ್ರತಿಯೊಬ್ಬರಿಗೂ ಭದ್ರತೆ, ಸೌಲಭ್ಯ ಮತ್ತು ಸಂಪನ್ಮೂಲಗಳ ಮೇಲಿನ ಹಕ್ಕು ಸಿಗುತ್ತದೆ. ಇದು ರಾಮ ರಾಜ್ಯ. ಅಂತಹ ಸಂಸ್ಕೃತಿಗೆ ಕೇಂದ್ರ ಸರ್ಕಾರ ಈಗಾಗಲೇ ಆರಂಭ ನೀಡಿದೆ ಎಂದು ಪ್ರತಿಪಾದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಒಂಬತ್ತೂವರೆ ವರ್ಷಗಳ ಆಡಳಿತಾವಧಿಯಲ್ಲಿ ಪರೋಪಕಾರಿ ಆಡಳಿತ ನಡೆಸಿದ್ದಾರೆ.ಬಡವರಿಗೆ ವಸತಿ, ಶೌಚಾಲಯ, ನೀರು ಮತ್ತು ಆರೋಗ್ಯ ವಿಮೆಗೆ ಸಂಬಂಧಿಸಿದಂತೆ ‌ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಾಚೀನ ಕಾಲದಿಂದಲೂ ಸಾಮಾನ್ಯವಾಗಿ ಬಳಸಲಾಗುವ ‘ರಾಮ ರಾಜ್ಯ’ ಎಂಬ ಪರಿಕಲ್ಪನೆಗೆ ಅಡಿಪಾಯ ಹಾಕಿದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!