ಮುಳ್ಳಯ್ಯನಗಿರಿ- ದತ್ತ ಪೀಠದ ನಡುವೆ ರೋಪ್ ವೇ ನಿರ್ಮಾಣ: ಸಿಎಂ ಬೊಮ್ಮಾಯಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠದ ನಡುವೆ ರೋಪ್ ವೇ ನಿರ್ಮಿಸಲು ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಇಂದು ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಿದೆ ಅದಕ್ಕೆ ಪರಿಹಾರ ಕಂಡುಕೊಳ್ಳಲು ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಳ್ಳುತ್ತಿದ್ದೇವೆ‌. ಆನೆ ದಾಳಿಯಿಂದ ಜೀವ ಹಾನಿಯಾದರೆ 15 ಲಕ್ಷಪರಿಹಾರ ನೀಡಲಾಗುತ್ತಿದೆ. ಆನೆ ದಾಳಿಯನ್ನು ತಡೆಯಲು ಪ್ರತಿ ಜಿಲ್ಲೆಗೆ ಸ್ಕ್ವಾಡ್ ರಚಿಸಲಾಗಿದೆ ಎಂದರು.

ಮಲೆನಾಡು ಭಾಗದಲ್ಲಿ ಅಕ್ರಮ ಒತ್ತುವರಿ , ಕಾಫಿ ಬೆಳೆಗಾರರ ಸಮಸ್ಯೆಗಳನ್ನು ನಿವಾರಿಸಲು ಕಂದಾಯ ಇಲಾಖೆಯವರು ಶೀಘ್ರ ಪರಿಹಾರ ಕಂಡುಕೊಳ್ಳಲಿದ್ದಾರೆ‌.ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಂದಿದೆ. ಔಷಧಿ ಸಿಂಪಡನೆ ಹಾಗೂ ರೋಗ ಹರಡದಂತೆ ಪರಿಹಾರ ಕಂಡುಕೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆ ನಡೆಸಿದೆ. ಈ ಭಾಗದ ಪ್ರವಾಹ ಬಂದು ಹಾಳಾಗಿರುವ ರಸ್ತೆಗಳ ದುರಸ್ತಿಗೆ 5.80 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನೂ 5 ಕೋಟಿ ರೂ. ಹೆಚ್ಚಿನ ಅನುದಾನವನ್ನು ಬಿಡುಗಡೆ ನಿನ್ನೆಯಷ್ಟೇ ಬಿಡುಗಡೆ ಮಾಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!