Saturday, September 20, 2025

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣ: TTD ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದ ಭಕ್ತರಿಗೆ ಅನುಕೂಲವಾಗುವಂತೆ ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ (TTD) ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಈ ನಿರ್ಧಾರವು ಭಕ್ತರಿಗೆ ಸುಲಭ ದರ್ಶನ ಮತ್ತು ಶ್ರದ್ಧಾ ಅನುಭವ ನೀಡಲು ಉದ್ದೇಶಿಸಲಾಗಿದೆ.

ಸದ್ಯ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದೆ. ಕಳೆದ ಬಾರಿ ತಿರುಪತಿಯಲ್ಲಿ ಕಾಲ್ತುಳಿತದ ಘಟನೆ ನಡೆದಿದ್ದು, ಈ ಬಾರಿ ಭಕ್ತರ ಸುರಕ್ಷತೆ ಮತ್ತು ವ್ಯವಸ್ಥಿತ ದರ್ಶನಕ್ಕೆ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಸೆಪ್ಟೆಂಬರ್ 28ರಂದು ಭಾನುವಾರ ನಡೆಯುವ ಗರುಡ ಸೇವೆ ಭಕ್ತರ ಪ್ರಮುಖ ಆಕರ್ಷಣೆ ಆಗಿದ್ದು, ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ