ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ನಳಂದಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿಜನರು ಸಿಲುಕಿವ ಸಾಧ್ಯತೆವಿದೆ.
ಇಲ್ಲಿನ ಭಾಗನ್ ಬಿಘಾ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಭಕ್ತಿಯಾರ್‌ಪುರ-ರಾಜೌಲಿ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಮೇಲ್ಸೇತುವೆಯ ಹೆಚ್ಚಿನ ಭಾಗ ಕುಸಿದಿದೆ. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಬೇನಾ ಪೊಲೀಸ್ ಠಾಣೆ ಮತ್ತು ಭಾಗನ್ ಬಿಘಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಿದ್ದಾರೆ.
ಅವಶೇಷಗಳಡಿಯಲ್ಲಿ ಎಷ್ಟು ಮಂದಿ ಹೂತು ಹೋಗಿದ್ದಾರೆ ಎಂಬ ಬಗ್ಗೆ ಸದ್ಯ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.