September 20, 2026
Sunday, September 20, 2026
spot_img

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಬಾಲಕನ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಸಂಚರಿಸುತ್ತಿದ್ದ ಬಾಲಕನ ವಿರುದ್ಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪಟ್ಟಣದ ಸೋಹಲ್ ನಂದಿಗಟ್ಟಿ ಎಂಬ ಬಾಲಕ ಕಸೂರ ಕ್ರಾಸ್ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪಂಚರ ಸಮ್ಮುಖದಲ್ಲಿ ಆತನನ್ನು ವಶಕ್ಕೆ ಪಡೆದು ತಾಲೂಕು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ.

ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬಾಲಕನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !