ಹೊಸದಿಗಂತ ಡಿಜಿಟಲ್ ಡೆಸ್ಕ್;
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಉಗ್ರರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮೂವರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ.
ವಜಾಗೊಂಡ ನೌಕರರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಫಿರ್ದೌಸ್ ಅಹ್ಮದ್ ಭಟ್, ಶಿಕ್ಷಕ ಮೊಹಮ್ಮದ್ ಅಶ್ರಫ್ ಭಟ್ ಮತ್ತು ಅರಣ್ಯ ಇಲಾಖೆಯಲ್ಲಿ ಆರ್ಡರ್ಲಿ ನಿಸಾರ್ ಅಹ್ಮದ್ ಖಾನ್ ಸೇರಿದ್ದಾರೆ.
ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ತನಿಖೆಯಲ್ಲಿ ಅವರ ಉಗ್ರ ಸಂಪರ್ಕ ದೃಢಪಟ್ಟ ನಂತರ ಲೆಫ್ಟಿನೆಂಟ್ ಗವರ್ನರ್ ಈ ಕ್ರಮ ಕೈಗೊಂಡಿದ್ದಾರೆ.
ಇದಕ್ಕೂ ಮೊದಲು ನವೆಂಬರ್ 2024 ರಲ್ಲಿ ಸಿನ್ಹಾ ‘ಉಗ್ರರ ಜೊತೆ ಸಂಪರ್ಕ’ ಹೊಂದಿದ್ದ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದರು.