ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ನಡುವಿನ ಗಲಾಟೆ ಇದೀಗ ಬೇರೆ ಆಯಾಮ ತೆಗೆದುಕೊಂಡಿದೆ. ಡಿ.ಕೆ ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾನು ಶ್ರೀರಾಮುಲು ಅವರಿಗೆ ಈಗ ಯಾವುದೇ ಆಹ್ವಾನ ನೀಡಿಲ್ಲ ಎಂದಿದ್ದಾರೆ.
ನಾನು ಶ್ರೀರಾಮುಲು ಅವರನ್ನು ಭೇಟಿಯಾಗಿಲ್ಲ, ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ನಾನು ಪಕ್ಷಕ್ಕೆ ಬರಲು ಕೇಳಿದ್ದೆ. ಆಗ ಶ್ರೀರಾಮುಲು ಅವರು ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದ್ದರು. 50 ಶಾಸಕರನ್ನು ಕೂಡ ಸಂಪರ್ಕ ಮಾಡಿದ್ದೆ ಎಂದು ಹೇಳಿದ್ದಾರೆ.