Sunday, October 2, 2022

Latest Posts

ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ- ಸವಾರ ಸಾವು

ಹೊಸದಿಗಂತ ವರದಿ, ಮಂಡ್ಯ:
ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕಲ್ಲಹಳ್ಳಿ ಬಡಾವಣೆಯಲ್ಲಿ ಶನಿವಾರ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಲ್ಲಹಳ್ಳಿ ಬಡಾವಣೆ ನಿವಾಸಿ ಪ್ರಶಾಂತ್ (28) ಮೃತ ದುದೈರ್ವಿ.
ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪ್ರಶಾಂತ್ ಗುರುವಾರ ಬೆಳಗ್ಗೆ ಕೆಲಸಕ್ಕೆ ಬೈಕ್‌ನಲ್ಲಿ ಹೋಗುವಾಗ ಕಲ್ಲಹಳ್ಳಿಯ ಸರ್ಕಾರಿ ಶಾಲೆ ಎದುರು ಮೈಸೂರು ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿ ಸಂಖ್ಯೆ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಪ್ರಶಾಂತ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಚಾರಿ ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!