ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ್ಪಿನಂಗಡಿ ಗಾಂಧೀಪಾರ್ಕ್ ಬಳಿ ರಾ. ಹೆ. ೭೫ ರಲ್ಲಿ ಕಂಟೈನರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿ ಸಂಚಾರ ಕೆಲ ಕಾಲ ತಡೆ ಹಿಡಿಯಲ್ಪಟ್ಟ ಘಟನೆ ಮಂಗಳವಾರ ಸಾಯಂಕಾಲ ಸಂಭವಿಸಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಂಟೈನರ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರಾಕ್ಷರ್ ಹೆದ್ದಾರಿಗಡ್ದವಾಗಿ ಮಗುಚಿ ಬಿತ್ತು. ಘಟನೆಯಿಂದ ಯಾರಿಗೂ ಅಪಾಯ ಸಂಭವಿಸಿಲ್ಲವಾದರೂ ಹೆದ್ದಾರಿ ಸಂಚಾರಕ್ಕೆ ಅಡೆತಡೆಯುಂಟಾಯಿತು. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ಸಂಚಾರ ಪುನರಾರಂಭಕ್ಕೆ ಅಗತ್ಯ ಕ್ರಮ ಕೈಗೊಂಡರು.