Wednesday, September 27, 2023

Latest Posts

BREAKING | ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಮತ್ತೊಂದು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಇಂದು ಮತ್ತೊಬ್ಬರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ 4ಕ್ಕೆ ಏರಿಕೆಯಾಗಿದೆ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಸೇರಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಇಂದು ಬೆಳಗ್ಗೆ 50 ವರ್ಷದ ರುದ್ರಪ್ಪ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ರುದ್ರಪ್ಪ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಈವರೆಗೂ ಮಂಜುಳಾ(23), ರಘು(25) ಹಾಗೂ ಪ್ರವೀಣ (25) ಎನ್ನುವವರು ಕಲುಷಿತ ನೀರು ಸೇವನೆ ಮಾಡಿ ಮೃತಪಟ್ಟಿದ್ದಾರೆ. ಕಣ್ಣ ಮುಂದೆಯೇ ಬಾಳಿ ಬದುಕಬೇಕಿದ್ದ ಮಕ್ಕಳನ್ನು ಕಳೆದುಕೊಂಡ ಹೆತ್ತರವರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಮಧ್ಯೆ ಕಲುಷಿತ ನೀರು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇದಕ್ಕೆ ಲವ್ ಸ್ಟೋರಿ ಲಿಂಕ್ ಆಗಿದೆ ಎನ್ನಲಾಗಿದೆ.

ಎರಡು ಸಮಾಜಗಳ ಯುವಕ-ಯುವತಿ ಪ್ರೀತಿಸಿ ಮದುವೆಯಾಗಬೇಕು ಎಂದುಕೊಂಡಿದ್ದರು, ಆದರೆ ಹುಡುಗಿ ಮೈನರ್ ಆದ ಕಾರಣ ಮದುವೆ ಮಾಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಒಂದು ಸಮಾಜದವರು ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿರುವ ಶಂಕೆಯೂ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!