ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ, 52 ಜನರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ವಾಂತಿ ಭೇದಿಯಿಂದ ನರಳುತ್ತಿದ್ದಾರೆ. ಚನ್ನಗಿರಿ, ಭದ್ರಾವತಿ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ 52 ಮಂದಿ ದಾಖಲಾಗಿದ್ದಾರೆ.
ಆರೋಗ್ಯ ಇಲಾಖೆ ನೌಕರರು ಜೋಳದಾಳ್ ಗ್ರಾಮದಲ್ಲಿಯೇ ಬಿಡಾರ ಹೂಡಿದ್ದಾರೆ. ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಡಿಹೆಚ್ ಒ ಡಾ.ಷಣ್ಮುಗಪ್ಪ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ 15 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.