ಕಲುಷಿತ ನೀರು ತಂದ ಆಪತ್ತು: ಐದು ವರ್ಷದ ಮಗು ಮೃತ್ಯು, ಹಲವರು ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲುಷಿತ ನೀರು ಕುಡಿದು ಮಗು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ನಡೆದಿದೆ.

ಗ್ರಾಮಕ್ಕೆ ಸರಬರಾಜಾಗುವ ನೀರು ಕಲುಷಿತಗೊಂಡಿದ್ದು, ಹಲವರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಐದು ವರ್ಷದ ಮಗು ಸಾವನ್ನಪ್ಪಿದೆ. ಘಟನೆಯ ನಂತರ ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ದೀಪಾವಳಿ ಹಬ್ಬವನ್ನು ಆಚರಿಸುವ ಜನರು ವಾಂತಿ ಮತ್ತು ಬೇಧಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ಈ ಘಟನೆ ನಡೆದಿದೆ. ನೀರು ಸರಬರಾಜು ಮಾಡಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!