ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್‌ನಿಂದ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ವಿರುದ್ಧ ಭೂತಲದಿನ್ನಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿದರು.
ಕರ್ತವ್ಯ ಲೋಪ ಹಾಗೂ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮ ಪಂಚಾಯಿತಿ ಪಿಡಿಒ ಶಿವರಾಜು ಮತ್ತು ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.