ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಅಹಿತಕರ ಘಟನೆಗಳಿಂದ ಜಿಲ್ಲೆಯ ಜನತೆಗೆ ಶಾಂತಿಗೆ ಭಂಗವಾದ ಹಿನ್ನೆಲೆಯಲ್ಲಿ ಹೇರಲಾದ ಸೆಕ್ಷನ್ ನನ್ನು ಆ.6ರವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಆ.6ರವರೆಗೆ ಸೆಕ್ಷನ್ ಜಾರಿಯಲ್ಲಿದೆ. ಆದರೆ ಜಿಲ್ಲಾ ವ್ಯಾಪ್ತಿಯಲ್ಲಿ ಆ.3ರವರೆಗೆ 144 ಸೆಕ್ಷನ್ ಜಾರಿಯಲ್ಲಿತ್ತು. ಇದೀಗ ಅದನ್ನು ಮತ್ತೆ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ. ಅಲ್ಲದೆ ಈ ದಿನಗಳಲ್ಲಿ ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.