ಇಡಿ ವಿರುದ್ಧ ಮುಂದುವರೆದ ಕಾಂಗ್ರೆಸ್ ಹೋರಾಟ: ಜು.26ರಂದು ಮೌನ್ ಸತ್ಯಾಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ವಿಚಾರಣೆ ವಿರುದ್ಧ ಈಗಾಗಲೇ ಬೆಂಗಳೂರು, ರಾಜ್ಯಾಧ್ಯಂತ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ಈ ಬಳಿಕಇದರ ಭಾಗವಾಗಿ ಮತ್ತೆ ಜುಲೈ.26ರಂದು ಬೆಂಗಳೂರಿನ ಕಾಂಗ್ರೆಸ್ ಭನದ ಗಾಂಧಿ ಪ್ರತಿಮೆ ಬಳಿಯಲ್ಲಿ ರಾಜ್ಯದ ಎಲ್ಲಾ ನಾಯಕರು ಮೌನ ಸತ್ಯಾಗ್ರಾಹ ನಡೆಸೋದಕ್ಕೆ ನಿರ್ಧರಿಸಲಾಗಿದೆ.
ಈ ಕುರಿತಂತೆ ಇಂದು ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ‘ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂದರು.
ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್, ಪಕ್ಷದ ಪದಾಧಿಕಾರಿಗಳು ಎಲ್ಲರೂ 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ತಿಳಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!