Monday, August 15, 2022

Latest Posts

ಕಾಪು ಕಡಲಲ್ಲಿ ಸಿಲುಕಿರುವ ನೌಕೆಯ ರಕ್ಷಣೆಗೆ ಇಂದೂ ಮುಂದುವರಿದಿದೆ ಕಾರ್ಯಾಚರಣೆ: ಸಂಸದರ ಜೊತೆ ಕೋಸ್ಟ್ ಗಾರ್ಡ್ ಅಧಿಕಾರಿಗಳೊಂದಿಗೆ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಉಡುಪಿ:

ತೌಕ್ತೆ ಚಂಡಮಾರುತದ ಪರಿಣಾಮ ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ದೀಪ್ತಂಭದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್‌ಪಿಎಲ್ ಕಂಪನಿಗೆ ಆಗಮಿಸುವ ಕಚ್ಚಾತೈಲ ಅಂಡರ್ ಗ್ರೌಂಡ್ ಪೈಪ್ ಕನೆಕ್ಟ್ ಮಾಡುವ ಗುತ್ತಿಗೆ ಪಡೆದಿರುವ ಕೀರ್ಸೊರ್ ಕಂಪನಿಯ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿರುವವರ ರಕ್ಷಣಾ ಕಾರ್ಯಾಚರಣೆ ಕುರಿತು ದ.ಕ. ಸಂಸದರು ಮತ್ತು ಸಚಿವರು ಕೋಸ್ಟ್ ಗಾರ್ಡ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇಂಡಿಯನ್ ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಾರ್ಯಾಚರಣೆಯ ಮಾಹಿತಿ ಪಡೆದುಕೊಂಡರು.

ಇಂದು ಮುಂಜಾನೆಯಿಂದ ನೌಕಾ ಸೇನೆಯ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಯುತ್ತಿದೆ. ಅಪಾಯಕ್ಕೆ ಸಿಲುಕಿದ್ದ 9 ಜನರಲ್ಲಿ ಈಗಾಗಲೇ ಐವರನ್ನು ರಕ್ಷಿಸಲಾಗಿದೆ. ಉಳಿದ ನಾಲ್ವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಕೋಸ್ಟಲ್ ಗಾರ್ಡ್ ಡಿಐಜಿ ಎಸ್.ಬಿ. ವೆಂಕಟೇಶ್ ಅವರು ಮಾಹಿತಿ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss