ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಿನ್ನೆಯಿಂದ ಎನ್ಕೌಂಟರ್ ನಡೆಯುತ್ತಿದ್ದು, ಇಂದು ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆ.
ಅನಂತ್ನಾಗ್ ಎನ್ಕೌಂಟರ್ನಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ ೪ಕ್ಕೆ ಏರಿಕೆಯಾಗಿದೆ. ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.
ನಿನ್ನೆ ಸೇನೆಯ ರಾಷ್ಟ್ರೀಯ ಘಟಕದ ಕಮಾಡಿಂಗ್ ಆಫೀಸರ್ ಮನ್ಪ್ರೀತ್ ಸಿಂಗ್, ಕಮಾಂಡರ್ ಮೇಜರ್ ಆಶಿಸ್ ಮತ್ತು ಡಿಎಸ್ಪಿ ಹುಮಾಯುನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ.