ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ಇಂದು ಕೂಡ ಮಳೆ ಮುಂದುವರಿಯಲಿದೆ.
ಈ ವಾರವಿಡೀ ಮಳೆ ಮುಂದುವರಿದಿದ್ದು, ಕೊಡಗು, ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಹಾಸನ, ಧಾರವಾಡ, ದಾವಣಗೆರೆ, ದಕ್ಷಿಣ ಕನ್ನಡದ ಆಯ್ದ ಜಿಲ್ಲೆಗಳ ಶಾಲೆ ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕರಾವಳಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಹಾಗೂ ಸಾರ್ವಜನಿಕರಿಗೆ ಸಮುದ್ರ ದಡದಿಂದ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಲಾಗಿದೆ.